• 08251 231197
  • vptputtur@yahoo.co.in

ವಾರ್ಷಿಕ ಕ್ರೀಡಾಕೂಟ-2014

ವಿವೇಕಾನಂದ ತಾಂತ್ರಿಕ ವಿದ್ಯಾಲಯದ 2013-14 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ದಿನಾಂಕ 8-3-2014 ರ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಉಪ ಪ್ರಾಚಾರ್ಯ ಪ್ರೊಫೆಸರ್ ಯಂ. ಯು. ಪ್ರಭಾಕರ್ ಉದ್ಘಾಟಿಸಿದರು. ಈ ಸಂದರ್ಭ ಅವರು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ ಮುಖ್ಯವೇ ಹೊರತು ಸೋಲು, ಗೆಲುವು ಮುಖ್ಯವಲ್ಲ. ವಿದ್ಯಾರ್ಥಿಗಳು ಅವರ ಸಾಮರ್ಥ್ಯದಂತೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರ್ರಾಂಶುಪಾಲರಾದ ಶ್ರೀ ಗೋಪಿನಾಥ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಸ್ವಾಗತವನ್ನು ವಿದ್ಯಾರ್ಥಿ ನಾಯಕ ವಿವೇಕ ಎಸ್. ಮಾಡಿದರು. ವಿದ್ಯಾರ್ಥಿನಿ ನಾಯಕಿ ಶಿಲ್ಪಾ ಹೆಗ್ಡೆ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಶ್ರೀ ರವಿರಾಮ್ ಎಸ್. ಇವರು ನಿರೂಪಿಸಿದರು.

Highslide for Wordpress Plugin