• 08251 231197
  • vptputtur@yahoo.co.in

ಸಾಂಪ್ರದಾಯಿಕ ದಿನಾಚರಣೆ

ಪುತ್ತೂರು: ಇಲ್ಲಿನ ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಸಾಂಪ್ರದಾಯಿಕ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎ ವಿ ನಾರಯಣರವರು ದೀಪಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ವಿದ್ಯಾರ್ಥಿಗಳು ಪಾಠದ ಜೊತೆಯಲ್ಲಿ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಬೆಳಸಿಕೊಳ್ಳಬೇಕು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಗೋಪಿನಾಥ್ ಶೆಟ್ಟಿ ಉಪಪ್ರಾಂಶುಪಾಲರಾದ ಶ್ರೀ ಹರೇಕೃಷ್ಣ ಬಿ ಹಾಗು ವಿದ್ಯಾರ್ಥಿ ಕ್ಷೇಮಪಾಲಕರಾದ ಶ್ರೀ ಚಂದ್ರಕುಮಾರ್ ಹಾಗು ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗು ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಶ್ರೀ ವಿವೇಕ್ ಎಸ್ ಸ್ವಾಗತಿಸಿ ವಂದಿಸಿದರು.

Highslide for Wordpress Plugin