ಪುತ್ತೂರು: ಭಾರತ ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿ ಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದರ ಸಲುವಾಗಿ ಸಂಸ್ಥೆಯಲ್ಲಿ ಸಂಭ್ರಮಾಚರಣೆಯನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಹಾಗೂ ಆಡಳಿತ ಮಂಡಳಿಯ ಅದ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರದ ಮಹಾದೇವ ಶಾಸ್ತ್ರಿ ಮಣಿಲ ಉಪಸ್ಥಿತರಿದ್ದರು. ಸದಸ್ಯರಾದ ರವಿಮುಂಗ್ಲಿಮನೆ ಇವರು ಯಶಸ್ವಿಗೆ ಕಾರಣರಾದ ಎಲ್ಲಾ ಇಸ್ರೋ ತಂಡಕ್ಕೆ ಧನ್ಯವಾದ ಸಮರ್ಪಿಸಿದರು.