• 08251 231197
  • vptputtur@yahoo.co.in

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ದಿನಾಂಕ 29-04-2024 ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ನಡೆಸಲಾಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಯುತ ಡಾ| ಮಹೇಶ್‌ ಪ್ರಸನ್ನ ಮಾತನಾಡುತ್ತಾ, “ಜೀವನದಲ್ಲಿ ಯಶಸ್ಸು ಸಿಗಬೇಕಾದರೆ 5 ಅಂಶಗಳಿರಬೇಕು ಅವು ಯಾವುದೆಂದರೆ ನಮ್ಮ ನಡವಳಿಕೆ ನಮ್ಮಲ್ಲಿ ನಮಗಿರುವ ನಂಬಿಕೆ, ಸಮಯಪ್ರಜ್ಞೆ, ತಂಡದೊಂದಿಗೆ ಕೆಲಸಮಾಡುವ ಹೊಂದಾಣಿಕೆ, ನಮ್ಮಲ್ಲಿರುವ ಕೌಶಲ್ಯ ಅಭಿವೃದ್ಧಿಗೊಳಿಸುವಿಕೆ, ತನ್ಮೂಲಕ ಹೆಚ್ಚಿನ ಕೌಶಲ್ಯ ಆಭಿವೃದ್ಧಿಯಿಂದ ಬದುಕುವುದು, ಯಾವಾಗಲೂ ಒಳ್ಳೆಯದನ್ನೇ ಮಾಡಿ, ಒಳ್ಳೆಯವರಾಗಿ, ಎಲ್ಲರನ್ನೂ ಗೌರವದಿಂದ ಕಾಣುತ್ತಾ ನಿಮ್ಮ ಜೀವನದ ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಿಮ್ಮೆಲ್ಲರ ಜೀವನದ ಕನಸುಗಳನ್ನು ಪುತ್ತೂರ ಒಡೆಯ ಈಡೇರಿಸಲಿ” ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷರಾದ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಮಾತನಾಡುತ್ತಾ “ವಿದ್ಯಾರ್ಥಿಗಳಾದ ನೀವು ಜೀವನಕ್ಕೆ ಬೇಕಾದ ಮಾನಸಿಕತೆಯನ್ನು ಬೆಳೆಸಿಕೊಳ್ಳಿ. ನಿಮ್ಮ ಹೆತ್ತವರ ಕನಸನ್ನು ನನಸಾಗಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಜೀವನದ ದಾರಿಯಲ್ಲಿ ಸಫಲತೆಯನ್ನು ಸಾಧಿಸಿ ಸಂಸ್ಥೆಗೂ ಗೌರವವನ್ನು ತರುವಂತವರಾಗಿ” ಎಂದು ಹಾರೈಸಿದರು. ಸಂಸ್ಥೆಯ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಮಾತನಾಡುತ್ತಾ, “ವೇಗವಾಗಿ ಬದಲಾಗುವ ಜಗತ್ತಿನಲ್ಲಿ ಹೊಸ ಆವಿಷ್ಕಾರಗಳ ಜೊತೆ ಹೊಂದಿಕೊಂಡು, ಅಧ್ಯಯನ ಮಾಡುತ್ತಾ ಜೀವನಕ್ಕೆ ಪೂರಕವಾದ ಅಂಶಗಳನ್ನು ಬೆಳೆಸಿಕೊಳ್ಳಿ ಹಾಗೂ ಸಂಸ್ಥೆಯ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಿ” ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಮನದ ಮಾತುಗಳನ್ನು ಹಂಚಿಕೊಂಡರು ಹಾಗೂ ವಿಭಾಗ ಮುಖ್ಯಸ್ಥರು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಹಾಗೂ ಶ್ರೇಯೋಭಿವೃದ್ಧಿಗೆ ಶುಭ ನುಡಿದರು. ಈ ಸಂದರ್ಭದಲ್ಲಿ ಅತಿಥಿಗಳು, ಆಡಳಿತ ಮಂಡಳಿಯ ಸದಸ್ಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸೇರಿ ಭಾರತಮಾತೆಯ ಭೂಪಟಕ್ಕೆ ದೀಪ ಪ್ರಜ್ವಲನಗೈದರು.
ಕಾರ್ಯಕ್ರಮದ ಸ್ವಾಗತವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ನಡೆಸಿಕೊಟ್ಟರು. ಕಂಪ್ಯೂಟರ್‌ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗ ಮುಖ್ಯಸ್ಥರಾದ ಶ್ರೀ ಮುರಳೀಧರ್ ವಂದನಾರ್ಪಣೆಗೈದರು.
ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ ನರಸಿಂಹ ಪೈ ಹಾಗೂ ಸದಸ್ಯರಾದ ರವಿ ಮುಂಗ್ಲಿಮನೆ ಅಧ್ಯ್ಯಾಪಕ, ಅಧ್ಯಾಪಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಿರೂಪಣೆಯನ್ನು ಅಟೋಮೊಬೈಲ್ ವಿಭಾಗದ ಉಪನ್ಯಾಸಕರಾದ ಶ್ರೀ ಗುರುರಾಜ್ ನಡೆಸಿಕೊಟ್ಟರು.
Highslide for Wordpress Plugin