ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇದರ 2014-15 ರ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕೇಶವ ಸಂಕಲ್ಪದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಹಿರಿಯರಾದ ಸ್ಥಾಪಕ ಸಂಚಾಲಕ ಉರಿಮಜಲು ಶ್ರೀ ಕೆ. ರಾಮ ಭಟ್ ಇವರು ದೀಪ ಪ್ರಜ್ವಲಿಸುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ನುಡಿಮುತ್ತನ್ನು ಹೇಳುತ್ತಾ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಉತ್ತಮ ಮೌಲ್ಯಗಳನ್ನು ಕಲಿಯುತ್ತಾ ಸಮಾಜಕ್ಕೆ ಒಳ್ಳೆಯ ಕೊಡುಗೆಯಾಗಲಿ ಎಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಹ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ. ಪ್ರೊ. ಎ.ವಿ. ನಾರಾಯಣ್ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಅವಕಾಶದ ಸದುಪಯೋಗವನ್ನು ಪಡೆದುಕೊಂಡು ಸಮಾಜದ ಬೆಳವಣಿಗೆಗೆ ಸಹಾಯಕರಾಗಿ ಎಂದು ಆಶೀರ್ವದಿಸಿದರು. ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ. ಮುರಳೀಧರ ಭಟ್ ಬಿ, ಇವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಇಂಟ್ರ್ನೆಟ್ ಮತ್ತು ದೂರದರ್ಶನ ಇದರಿಂದ ಆದಷ್ಟು ದೂರವಿದ್ದು ಗುರಿಯ ಕಡೆ ಗಮನ ಹರಿಸಬೇಕೆಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುಣಪಾಲ್ ಜೈನ್, ಅಗರ್ತಬೈಲು ಕೃಷ್ಣ ನಾಯ್ಕ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗೋಪಿನಾಥ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಹರೇಕೃಷ್ಣ ಬಿ, ವಿದ್ಯಾರ್ಥಿ ಕ್ಷೇಮಧಿಕಾರಿಯಾದ ಶ್ರೀ ಚಂದ್ರಕುಮಾರ್ ಉಪಸ್ಥಿತರಿದ್ದರು.
ಸಮಾರಂಭದ ಸ್ವಾಗತವನ್ನು ಉಪಪ್ರಾಂಶುಪಾಲರಾದ ಶ್ರೀ ಹರೇಕೃಷ್ಣ ಬಿ, ಹಾಗೂ ವಂದನಾರ್ಪಣೆಯನ್ನು ವಿದ್ಯಾರ್ಥಿ ಕ್ಷೇಮಧಿಕಾರಿಯಾದ ಶ್ರೀ ಚಂದ್ರಕುಮಾರ್ ಮಾಡಿದರು. ಕಾರ್ಯಕ್ರಮವನ್ನು ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಹರೀಶ್ ಭಟ್ ನಿರೂಪಿಸಿದರು.