ಪುತ್ತೂರು: ‘ಓಣಂ’ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಚಂದ್ರಕುಮಾರ್ ಅವರು ದೀಪ ಬೆಳಗಿಸಿ ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಿವಿಲ್ ಗುತ್ತಿಗೆದಾರರಾದ ಗೋಪಾಲ್ ಸೂರಿಕುಮೇರು ಉಪಸ್ಥಿತರಿದ್ದರು. ಈ ಹಬ್ಬವನ್ನು ಕಾಲೇಜಿನ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದರು. ಕಾಲೇಜಿನ ಪ್ರಾಚಾರ್ಯರಾದ ಗೋಪಿನಾಥ ಶೆಟ್ಟಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥರುಗಳು, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.