ಪುತ್ತೂರು: ಅಸೋಸಿಯೇಷನ್ ಆಪ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ), ಮಂಗಳೂರು ವಿಭಾಗ ಮತ್ತು ರ್ಯಾಮ್ಕೋ ಸಿಮೆಂಟ್ ಇದರ ಸಹಕಾರದೊಂದಿಗೆ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಮಳೆ ನೀರು ಕೊಯ್ಲು ಹಾಗೂ ಮಾರ್ವೆಲ್ ಇನ್ ಸಿವಿಲ್ ಇಂಜಿನಿಯರಿಂಗ್ ಎಂಬ ವಿಷಯದ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಖ್ಯಾತ ಸಿವಿಲ್ ಇಂಜಿನಿಯರ್ ಅನಿಲ್ ಬಾಳಿಗ ಮತ್ತು ಯೆನಪೋಯ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ರಕ್ಷಿತ್ ಆರ್ ಶೆಟ್ಟಿ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ರ್ಯಾಮ್ಕೋ ಸಿಮೆಂಟ್ ಇಂಜಿನಿಯರ್ ಶಿವರಾಜ್ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ನ ಹಳೆ ವಿದ್ಯಾರ್ಥಿ ಪ್ರಶಾಂತ್ ಉಪ್ಪಿನಂಗಡಿ ಉಪಸ್ಥಿತರಿದ್ದರು. ಸರ್ ಎಂ ವಿಶ್ವೇಶ್ವರಯ್ಯರವರ ಜನ್ಮದಿನದ ಪ್ರಯುಕ್ತ ರ್ಯಾಮ್ಕೋ ಸಿಮೆಂಟ್ರವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಗಳಲ್ಲಿ ನಡೆಸುವ ‘ಟೆಕ್ನೋ ವೀಕ್’ ಎಂಬ ಒಂದು ವಾರಗಳ ತಾಂತ್ರಿಕ ಮಾಹಿತಿ ಕಾರ್ಯಗಾರದ ಪ್ರಯುಕ್ತ ಈ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರ ಸಂವಾದ ನಡೆಸಲಾಯಿತು.
ವಿವೇಕಾನಂದ ಪಾಲಿಟೆಕ್ನಿಕ್ನ ಪ್ರಾಚಾರ್ಯರಾದ ಶ್ರೀ ಗೋಪಿನಾಥ ಶೆಟ್ಟಿ ಇವರ ಮಾಗದಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿವಿಲ್ ವಿಭಾಗ ಮುಖ್ಯಸ್ಥರಾದ ರವಿರಾಮ ಎಸ್ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕರಾದ ಮಗೇಶ್ ಧನ್ಯವಾದ ನೀಡಿದರು. ಈ ಕಾರ್ಯಕ್ರಮದಲ್ಲಿ ಸಿವಿಲ್ ವಿಭಾಗದ ಎಲ್ಲಾ ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.