ಪುತ್ತೂರು: ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರದ ವತಿಯಿಂದ ತೃತೀಯ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ಸಂದರ್ಶನ ಎದುರಿಸುವ ಕುರಿತು ಒಂದು ದಿನದ ಮಾಹಿತಿ ಕಾರ್ಯಗಾರ ಏರ್ಪಡಿಸಲಾಯಿತು. ಈ ಕಾರ್ಯಗಾರದಲ್ಲಿ ಸಂದರ್ಶನಕ್ಕೆ ಹೊರಡುವ ಮೊದಲಿನ ತಯಾರಿ ಹಾಗೂ ಸಂದರ್ಶನ ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರದ ಅಧಿಕಾರಿ ವಿವೇಕ್ ಭಂಡಾರಿ ಸವಿವರವಾಗಿ ತಿಳಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀ ಗೋಪಿನಾಥ ಶೆಟ್ಟಿ ಇವರ ಮಾಗದಶನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಯೋಗ ಮಾಹಿತಿ ಹಾಗೂ ತರಬೇತಿ ವಿಭಾಗದ ಅಧಿಕಾರಿ ಶ್ರೀಮತಿ ಉಷಾಕಿರಣ ನಡೆಸಿಕೊಟ್ಟರು. ತೃತೀಯ ವರ್ಷದ ಅಟೋಮೋಬೈಲ್, ಮೆಕಾನಿಕಲ್, ಸಿವಿಲ್, ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.