ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಜನವರಿ 30 ರಂದು ಹುತಾತ್ಮರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಚಂದ್ರಕುಮಾರ್ ಅವರು ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಜಲಿಯನ್ ವಾಲಾಭಾಗ್ ಘಟನೆಗಳನ್ನು ನೆನಪಿಸುತ್ತಾ ಸಂಗೊಳ್ಳಿ ರಾಯಣ್ಣ, ವೀರ ಸಾವರ್ಕರ್, ಝಾನ್ಸಿರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ, ಚಂದ್ರಶೇಖರ ಆಜಾದ್ ಮುಂತಾದವರು ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಮಹಾತ್ಮಾಗಾಂಧಿಯವರ ಪುಣ್ಯತಿಥಿಯಂದು ರಾಷ್ಟ್ರೀಯ ಹುತಾತ್ಮ ದಿನವನ್ನು ಆಚರಿಸಲಾಗುತ್ತದೆ ಎಂದರು. ಎರಡು ನಿಮಿಷದ ಮೌನಚರಣೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.