• 08251 231197
  • vptputtur@yahoo.co.in

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕಾರ್ಯಗಾರ

ಪುತ್ತೂರು: ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರದ ವತಿಯಿಂದ ತೃತೀಯ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಎದುರಿಸಬೇಕಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಈ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರುವ ಪ್ರಶ್ನೆಗಳಿಗೆ ಹೇಗೆ ಸುಲಭವಾಗಿ ಉತ್ತರಿಸಬಹುದು ಹಾಗೂ ಉದ್ಯೋಗಕ್ಕೆ ಸೇರುವ ಮುನ್ನ ತಮ್ಮ ಜ್ಞಾನವನ್ನು ವೃದ್ಧಿಸುವುದು ಹೇಗೆ ಎಂಬುದರ ಬಗ್ಗೆ ರಾಮಕುಂಜ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಜೆ.ಸಿ.ಐ. ತರಬೇತುದಾರರಾದ ಶ್ರೀ ಸತೀಶ್ ಭಟ್, ಬಿಳಿನೆಲೆ ಅವರು ಸವಿವರವಾಗಿ ತಿಳಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

placement training

ಕಾಲೇಜಿನ ಪ್ರಾಚಾರ್ಯರಾದ ಶ್ರೀ ಗೋಪಿನಾಥ ಶೆಟ್ಟಿ ಇವರ ಮಾಗದಶನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಯೋಗ ಮಾಹಿತಿ ಹಾಗೂ ತರಬೇತಿ ವಿಭಾಗದ ಅಧಿಕಾರಿಗಳಾದ ಶ್ರೀಮತಿ ಉಷಾಕಿರಣ ಹಾಗೂ ಕಿರಣ್ ಪಾಲ್ ನಡೆಸಿಕೊಟ್ಟರು. ತೃತೀಯ ವರ್ಷದ ಅಟೋಮೋಬೈಲ್, ಮೆಕಾನಿಕಲ್, ಸಿವಿಲ್, ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

Highslide for Wordpress Plugin