ಪುತ್ತೂರು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ಇಂದು ನಡೆಯುವ ಭೂಮಿ ಪೂಜಾನಾ ಕಾರ್ಯಕ್ರಮದ ನೇರ ಪ್ರಸಾರವನ್ನು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿತ್ತು.
1992 ರ ಅಯೋಧ್ಯ ಕರಸೇವೆಯಲ್ಲಿ ಭಾಗೀದಾರರಾದ ಕೃಷ್ಣಭಟ್ ಕೋಡಪದವು ಅವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ತಮ್ಮ ಅಂದಿನ ಅನುಭವವನ್ನು ಸ್ವವಿವರವಾಗಿ ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಸಂಚಾಲಕರಾದ ಮಣಿಲ ಮಹಾದೇವ ಶಾಸ್ತ್ರಿ, ಪ್ರಾಚಾರ್ಯರಾದ ಗೋಪಿನಾಥ ಶೆಟ್ಟಿ, ಹಾಗೂ ಉದ್ಯೋಗ ನೈಪುಣ್ಯ ತರಬೇತಿಯ ಸಂಪನ್ಮೂಲ ವ್ಯಕ್ತಿಗಳು, ಶಿಬಿರಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.