• 08251 231197
  • vptputtur@yahoo.co.in

ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ

ಶಿಕ್ಷಣವೆಂದರೆ ಬರೇ ಉದ್ಯೋಗಕ್ಕಾಗಿ ಇರುವ ವ್ಯವಸ್ಥೆ ಅಲ್ಲ, ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸುವ ಕೆಲಸವನ್ನು ಶಿಕ್ಷಣ ಮಾಡಬೇಕು. – ಪ್ರಸನ್ನ ಭಟ್.

ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವವು ದಿನಾಂಕ 7-12-2020 ರಂದು ಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡಿತು. ಪೂಜಾ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆಗೈದು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಸಂಚಾಲಕರಾದ ಸಿ. ಮಹಾದೇವ ಶಾಸ್ತ್ರಿ ಮಣಿಲ ಇವರು ಮಾತನಾಡುತ್ತಾ, ಶಿಸ್ತು, ಸಹನೆ ಹಾಗೂ ತಾಳ್ಮೆಯಿಂದ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಹೆತ್ತವರು ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿ, ಶಿಕ್ಷಕರ ಜೊತೆ ಸಂಪರ್ಕದಲ್ಲಿರಿ. ಶಿಕ್ಷಣದ ಜೊತೆ ವಿದ್ಯಾರ್ಥಿಗಳ ನೈಪುಣ್ಯವನ್ನು ಹೆಚ್ಚಿಸುವ ಕೆಲಸ ಮುಂದಿನ ದಿನಗಳಲ್ಲಿ ನಮ್ಮ ಪಾಲಿಟೆಕ್ನಿಕ್ ಮಾಡುತ್ತದೆ. ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಸನ್ನ ಎನ್ ಭಟ್ ವಹಿಸಿದ್ದರು. ಇವರು ಮಾತನಾಡುತ್ತಾ ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ರಾಷ್ಟ್ರೀಯತೆಯನ್ನು ಬೆಳೆಸುವುದರ ಜೊತೆಗೆ ಉತ್ತಮ ತಾಂತ್ರಿಕ ನೈಪುಣ್ಯತೆಯನ್ನು ನೀಡುವುzಕ್ಕೆ ಒತ್ತು ಕೊಡುತ್ತೇವೆ. ವಿದ್ಯಾರ್ಥಿಗಳ ಮುಂದಿನ ಜೀವನವು ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ನಂತರ ಪೋಷಕರೊಂದಿಗ ವಿವಿಧ ವಿಭಾಗ ಮುಖ್ಯಸ್ಥರಿಂದ ಸಂವಾದ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಚಾರ್ಯರಾದ ಗೋಪಿನಾಥ್ ಶೆಟ್ಟಿ ಎಂ ಪ್ರಸ್ತಾವಿಕವಾಗಿ ಮಾತನಾಡುತ್ತಾ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಇಲೆಕ್ಟ್ರಾನಿಕ್ಸ್ ವಿಭಾಗದ ಹಿರಿಯ ಉಪನ್ಯಾಸಕಿ ಶ್ರೀಮತಿ ಉಷಾಕಿರಣ್ ಎಸ್.ಎಂ ನಡೆಸಿಕೊಟ್ಟರು. ಇಲೆಕ್ಟ್ರಾನಿಕ್ಸ್ ವಿಭಾಗದ ಹಿರಿಯ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಎಸ್ ಪ್ರಾರ್ಥಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಚಂದ್ರಕುಮಾರ್ ವಂದಿಸಿದರು.

Highslide for Wordpress Plugin