ವಿಶ್ವಯೋಗ ದಿನದಂದು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿಯವರು ಭಾಗವಹಿಸುತ್ತಾ ಯೋಗದಿಂದ ಆರೋಗ್ಯ. ಯೋಗವು ನಮ್ಮನ್ನು ನಾವೇ ತಿಳಿದುಕೊಳ್ಳುವ ಸಾಧನ. ಆದ್ದರಿಂದ ಎಲ್ಲರೂ ಯೋಗಾಭ್ಯಾಸವನ್ನು ನಿತ್ಯವೂ ಮಾಡಿ ಸದೃಢರಾಗಿ ಎಂದು ಹಿತವಚನ ನುಡಿದರು. ಈ ಕಾರ್‍ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಈಶ್ವರಚಂದ್ರ ಭಾಗವಹಿಸಿದ್ದರು.
ಸಿವಿಲ್ ವಿಭಾಗದ ಮುಖ್ಯಸ್ಥರಾದ ರವಿರಾಮ ಎಸ್. ಕಾರ್ಯಕ್ರಮದ ನಿರ್ವಹಣೆ ಮಾಡಿದರು. ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಯೋಗ ದಿನದ ಮಹತ್ವವನ್ನು ತಿಳಿಸಿ ಧನ್ಯವಾದ ಸಮರ್ಪಣೆ ಮಾಡಿದರು. ಕಾರ್‍ಯಕ್ರಮದಲ್ಲಿ ಶಿಕ್ಷಕ ವರ್ಗ, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.