ಪುತ್ತೂರು: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಶಾಖೆಯನ್ನು ಹೊಂದಿರುವ ಭಾರತದ ಪ್ರತಿಷ್ಠಿತ ಸಂಸ್ಥೆಯಾದ ’TAFE-EPD’ ವತಿಯಿಂದ ವಿವೇಕಾನಂದ ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ನಡೆಸಲಾಯಿತು.
ಇದರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಹಾಗೂ ಸುತ್ತಮುತ್ತಲಿನ ಪಾಲಿಟೆಕ್ನಿಕ್‌ಗಳಾದ ಕೆವಿಜಿ ಪಾಲಿಟೆಕ್ನಿಕ್ ಸುಳ್ಯ, PA ಪಾಲಿಟೆಕ್ನಿಕ್, ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ, ವಿವೇಕಾನಂದ ಪದವಿ ಕಾಲೇಜು, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜುಗಳಿಂದ ಬಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
’TAFE-EPD’ ಯ ಹೆಚ್.ಆರ್. ಅಡ್ಮಿನ್ ವಿಭಾಗದ ಡೆಪ್ಯೂಟಿ ಮೆನೇಜರ್ ಸದಾಶಿವರವರು ಟಫೇ ಕಂಪೆನಿಯ ಬಗ್ಗೆ ಹಾಗೂ ಉದ್ಯೋಗಿಗಳಿಗೆ ನೀಡಲಾಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ನಂತರ ನೇಮಕಾತಿ ಸಂದರ್ಶನ ನಡೆಸಿದರು.
ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಇವರ ಮಾರ್ಗದರ್ಶನದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಸಂಸ್ಥೆಯ ಉದ್ಯೋಗ ಹಾಗೂ ತರಬೇತಿ ವಿಭಾಗದ ನಿಯೋಜನ ಅಧಿಕಾರಿಗಳಾದ ಶ್ರೀಮತಿ ಉಷಾಕಿರಣ್ ಮತ್ತು ಶ್ರೀ ಸಜಿತ್ ಕುಮಾರ್ ಸಂಯೋಜಿಸಿದರು. ಕಾಲೇಜಿನ ಉಪನ್ಯಾಸಕರು ಸಹಕರಿಸಿದರು.