• 08251 231197
  • vptputtur@yahoo.co.in

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಾರ್ಷಿಕ ಕ್ರೀಡಾಕೂಟ.

ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕ ಕ್ರೀಡಾಕೂಟವು ದಿನಾಂಕ.  27-10-2023 ರಂದು ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಪ್ರಾರಂಭಗೊಂ ಕಾರ್ಯಕ್ರಮವನ್ನು ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸನತ್ ಕುಮಾರ್ ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಇವರುವಿದ್ಯೆ ಎಷ್ಟು ಮುಖ್ಯವೋ ಅಷ್ಟೇ ಕ್ರೀಡೆಯೂ ಮುಖ್ಯ“. ಇಂದು ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲೂ ಭಾಗವಹಿಸುವಂತಾಗಲಿಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಹಾಗೂ ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು, ಕಾಲೇಜಿನ ಶಿಕ್ಷಕ ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಶ್ರೀಮಾನಸ ತಂಡದವರು ಪ್ರಾರ್ಥಿಸಿದರು, ವಿದ್ಯಾರ್ಥಿ ನಾಯಕ ಮುಖೇಶ್ ಸ್ವಾಗತಿಸಿದರು, ಕೀಡಾ ಕರ್ಯದರ್ಶಿ ಚರಣ್ ಆಚಾರ್ಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶಮಂತ್ ಮೆಕ್ಯಾನಿಕಲ್ ವಿಭಾಗ ವಂದಿಸಿದರು. ವಾರ್ಷಿಕ ಕೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಡುವಲ್ಲಿ ವಿವೇಕಾನಂದ ಮಹಾವಿದ್ಯಾಲಯದ ದೈಹಿಕ ಶಿಕ್ಷಕರಾದ ಶ್ರೀ ರವಿಶಂಕರ್ ಮತ್ತು ಅಜಿತ್ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕ್ರೀಡಾ ಸಹಾಯ ನಿರ್ದೇಶಕರಾದ ಶ್ರೀ ಅನಿಲ್ ಸಹಕರಿಸಿದರು.

Highslide for Wordpress Plugin