ಪುತ್ತೂರು, ಜ. 19: ಶ್ರೀ ರಾಮ ಪ್ರಾಣ ಪ್ರತಿಷ್ಠಾ ಸಪ್ತಾಹದ ಅಂಗವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಪಾದುಕ ಪ್ರದಾನ” ಎಂಬ ಗಮಕ ಕಾರ್ಯಕ್ರಮ ನಡೆಯಿತು. ಭಾರತಾಂಬೆ ಮತ್ತು ಶ್ರೀ ರಾಮನ ಭಾವಚಿತ್ರಕ್ಕೆ ಪುಶ್ಪಾರ್ಚನೆ ಮಾಡುವುದರ ಮೂಲಕ ಅತಿಥಿಗಳು ವೇದಿಕೆಗೆ ಆಗಮಿಸಿದರು.
ರಾಮಾಯಣದ ಒಂದು ಭಾಗವಾದ ಪಾದುಕ ಪ್ರದಾನ ಎಂಬ ವಿಷಯದ ಬಗ್ಗೆ ಗಮಕ ಕಾರ್ಯಕ್ರಮವನ್ನು ಶ್ರೀ. ಪ್ರೊ. ಮಧೂರು ಮೋಹನ ಕಲ್ಲೂರಾಯ ಹಾಗೂ ಶ್ರೀ. ವಿಷ್ಣುಪ್ರಸಾದ ಕಲ್ಲೂರಾಯ ಇವರು ನಡೆಸಿಕೊಟ್ಟರು. ಗಮಕ ಎಂದರೆ ಸಾಹಿತ್ಯವನ್ನು ಸಂಗೇತದ ಸ್ವರ ಬಳಸಿ ಸುಶ್ರಾವ್ಯವಾಗಿ ಹೇಳುವುದು. ರಾಮಾಯಣವನ್ನು ಮತ್ತೆ ಮತ್ತೆ ಕೇಳುವುದರಿಂದ ಯಾವುದಾದರೊಂದು ವಿಚಾರವು ನಮ್ಮ ಆಚರಣೆಯಲ್ಲಿ ಬರುತ್ತದೆ. ರಾಮನ ವ್ಯಕ್ತಿತ್ವವನ್ನು ನಾವು ಅಳವಡಿಸಿಕೊಂಡರೆ ನಮ್ಮ ಜೀವನ ಶ್ರೇಷ್ಠವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪಾಲಿಟೆಕ್ನಿಕ್ ನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಈಶ್ವರಚಂದ್ರ ಇವರು ಮಾತನಾಡುತ್ತಾ ನಾನೊಬ್ಬ ಹಿಂದು ಎಂದು ಹೆಮ್ಮೆಯಿಂದ ಹೇಳಿಕೊಳ್ಳೋಣ ಎನ್ನುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿವೇಕಾನಂದ ಪಾಲಿಟೆಕ್ನಿಕ್ ನ ಅಧ್ಯಕ್ಷರಾದ ಶ್ರೀ. ವಿಶ್ವೇಶ್ವರ ಭಟ್ ಬಂಗಾರಡ್ಕ ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಿದರು.
ಶ್ರೀ ರಾಮ ಪ್ರಾಣ ಪ್ರತಿಷ್ಠಾ ಸಪ್ತಾಹದ ಪ್ರಯುಕ್ತ ಕಾಲೇಜಿನಲ್ಲಿ ನಡೆದ ವಿವಿಧ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಾಲಿಟೆಕ್ನಿಕ್ ಕಾಲೇಜಿನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ, ಪ್ರಾಂಶುಪಾಲರಾದ ಶ್ರೀ. ಚಂದ್ರಕುಮಾರ್, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಶ್ರೀ ರವಿರಾಮ್ ಎಸ್ ಆಯೋಜಿಸಿದ್ದರು. ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಯಲಕ್ಸ್ಮಿ ಎಸ್ ಪ್ರಾರ್ಥಿಸಿದರು. ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀ ಮುರಳೀಧರ್ ಎಸ್ ಅತಿಥಿಗಳನ್ನು ಪರಿಚಯಿಸುತ್ತಾ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಪಿ. ಕೆ. ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕಿ ಶ್ರೀಮತಿ ಸಹನಾ ಕಾರ್ಯಕ್ರಮ ನಿರೂಪಿಸಿದರು.