ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಶಿಕ್ಷಣವನ್ನು ನೀಡುವ ಸಲುವಾಗಿ ತರಬೇತುದಾರರಿಂದ ತರಬೇತಿ ನೀಡುವ ಕಾರ್ಯಕ್ರಮ ದಿ. 20/01/2025 ರಿಂದ ಹಮ್ಮಿಕೊಳ್ಳಲಾಗಿತ್ತು. ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಯೋಗ ಕೇಂದ್ರ ಪುತ್ತೂರಿನ ನಿರ್ದೇಶಕರಾದ ಸತ್ಯನಾರಾಯಣ ಪ್ರಸಾದ್ ಪಾಣಾಜೆ ಮಾತನಾಡುತ್ತಾ “ಯೋಗ ಪ್ರದರ್ಶನ ವಸ್ತುವಲ್ಲ ಮನಸ್ಸನ್ನು ಕೇಂದ್ರೀಕರಿಸಲು ಬಹು ಮುಖ್ಯವಾಗಿರುವ ಅಂಶ ಯೋಗ. ಇದನ್ನು ದಿನನಿತ್ಯ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸುಖವಾಗಿರಿ”ಎಂದು ಶುಭ ಹಾರೈಸಿದರು. ಕಾಲೇಜಿನ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ “ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದ ಕಲ್ಪನೆ ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಅಂಶಗಳನ್ನು ಕಲಿತು ನಿಮ್ಮ ಜೀವನವನ್ನು ಸುಖಮಯವಾಗಿಸಿಕೊಳ್ಳಿ“ಎಂದು ಹಾರೈಸಿದರು. ಕಾರ್ಯಕ್ರಮ ದಲ್ಲಿ ಯೋಗ ಶಿಕ್ಷಕರಾಗಿ ಗಿರೀಶ್ ಮಳಿ ವಕೀಲರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣವನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕರಾದ ಮಹಾದೇವ ಶಾಸ್ತ್ರಿ ಪ್ರಾಂಶುಪಾಲರಾದ ಮುರಳಿಧರ್ ಯಸ್ ಉಪಸ್ಥಿತರಿದ್ದರು. ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ನಿರೂಪಣೆಯನ್ನು ಸಿವಿಲ್ ವಿಭಾಗ ಮುಖ್ಯಸ್ಥರಾದ ರವಿರಾಮ ಸಿದ್ದಮೂಲೆ ನೆರವೇರಿಸಿದರು.