14-09-2013ರಂದು ಶಿಕ್ಷಕರ ಹಾಗೂ ಇಂಜಿನಿಯರ್ಸ್ ದಿನವನ್ನು ಜಂಟಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಆಗಮಿಸಿದ ಪುತ್ತೂರಿನ ಹಿರಿಯ ಇಂಜಿನಿಯರ್ ಶ್ರೀ ವೇಣುಗೋಪಾಲ ಶೆಣೈ ಅವರು ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಎಂ. ಗೋಪಿನಾಥ ಶೆಟ್ಟಿಯವರು ವಹಿಸಿದರು. ವೇದಿಕೆಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ಹರೇಕೃಷ್ಣ ಬಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಚಂದ್ರಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸರ್ ಎಂ ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಪಾಲಿಸುವ ಬಗ್ಗೆ ಚಿಂತನೆಯನ್ನು ನಡೆಸಿದರು. ಪಾಲಿಟೆಕ್ನಿಕ್ನ ವಿದ್ಯಾರ್ಥಿ ವಿವೇಕ ನಿರ್ವಹಿಸಿರುವ ಈ ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿ ಮುರಳೀಕೃಷ್ಣ ಸ್ವಾಗತಿಸಿ,ಕೊನೆಯಲ್ಲಿ ವಿದ್ಯಾರ್ಥಿ ಆದಿತ್ಯ ಆಚಾರ್ಯ ವಂದಿಸಿದರು.