News and Events
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಾರ್ಷಿಕ ಕ್ರೀಡಾಕೂಟ
ವಿವೇಕಾನಂದ ಪಾಲಿಟೆಕ್ನಿಕ್‌ನ ವಾರ್ಷಿಕ ಕ್ರೀಡಾಕೂಟವು ದಿನಾಂಕ 23-12-2022 ರಂದು ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮವನ್ನು ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಈಶ್ವರಚಂದ್ರ.ಡಿ.ಯನ್. ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಇವರು “ಕ್ರೀಡೆಯಿಂದ ನಮ್ಮ ಮನಸ್ಸು ಹಾಗೂ ಶರೀರ ಎರಡಕ್ಕೂ ವ್ಯಾಯಾಮ ಸಿಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲೂ ಕ್ರೀಡೆಗೆ ಬಹಳ ಪ್ರೋತ್ಸಾಹ ಸಿಗುತ್ತಿದೆ. ಇಂದು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ರಾಜ್ಯ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಮೃದು ಕೌಶಲ್ಯ ತರಬೇತಿ” ಕಾರ್ಯಕ್ರಮದ ಸಮಾರೋಪ ಸಮಾರಂಭ
ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ನಡೆದ 6 ದಿನಗಳ “ಮೃದು ಕೌಶಲ್ಯ ತರಬೇತಿ“ ಕಾರ್ಯಕ್ರಮದ ಸಮಾರೋಪ ಸಮಾರಂಭ ದಿನಾಂಕ–17/12/2022 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪಾಲಿಟೆಕ್ನಿಕ್‌ನ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ್ ಭಟ್ ಬಂಗಾರಡ್ಕ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ ಈ ತರಬೇತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದ ನೀವೆಲ್ಲರೂ ಉತ್ತಮ ಅವಕಾಶಗಳನ್ನು ಪಡೆಯಿರಿ” ಎಂದು ಶುಭ ಹಾರೈಸಿದರು. ಅತಿಥಿಗಳಾದ ಜಿಲ್ಲಾ ಕೌಶಲ್ಯ ತರಬೇತಿ ಅಧಿಕಾರಿಗಳಾದ ಶ್ರೀ ರೋಹಿತ್ ಮಾತನಾಡುತ್ತಾ “ನಿಮ್ಮಲ್ಲಿರುವ ಕೌಶಲ್ಯವನ್ನು ತೋರ್ಪಡಿಸಲು ಇರುವ ಅವಕಾಶವನ್ನು
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಮೃದು ಕೌಶಲ್ಯ ತರಬೇತಿ ಹಾಗೂ ಕೌಶಲ್ಯ ಜೋಡಣೆ” ಕಾರ‍್ಯಾಗಾರ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯದ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯ ತರಬೇತಿ ಅಧಿಕಾರಿಗಳಾದ ಶ್ರೀ ರೋಹಿತ್ ಮತ್ತು “ನಾಂದಿ ಫೌಂಡೇಶನ್“ನ ತರಬೇತುದಾರರಾದ ಶ್ರೀ ಶ್ರೀನಿವಾಸ್ ಕುಲಕರ್ಣಿ ಸಂಪನ್ಮೂಲ ವ್ಯಕ್ತಿಯಾಗಿ ಬಂದು ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹೇಶ್ ನಿಟಿಲಾಪುರ ಮಾತನಾಡುತ್ತಾ “ಸಂಪನ್ಮೂಲದ ಸದುಪಯೋಗ ಪಡಿಸಲು
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿವೇಕ ಉಪನ್ಯಾಸ ಮಾಲಿಕೆ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ನೈತಿಕ, ಬೌದ್ಧಿಕ ಹಾಗೂ ಆಧ್ಯಾತ್ಮಿಕ ಉಪನ್ಯಾಸಗಳ ಸರಣಿ ಮಾಲಿಕೆಯ 5 ನೇ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ತರಬೇತುದಾರರಾದ Rtn. .ಶ್ರೀ ಕೃಷ್ಣಮೋಹನ್ ಪಿ.ಯಸ್. ಅವರು “ಭವಿಷ್ಯ+++” ಎಂಬ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉತ್ತಮ ಅವಕಾಶಗಳು ಹಾಗೂ ಅವುಗಳ ಸದುಪಯೋಗದ ವಿಷಯವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 2022-23 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕರ‍್ಯಕ್ರಮವು ದಿನಾಂಕ 19-11-2022 ರಂದು ನಡೆಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕರ‍್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ದಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ಮಾತನಾಡುತ್ತಾ “ನಾಯಕತ್ವದ ಗುಣ ವಿದ್ಯಾರ್ಥಿ ದೆಸೆಯಲ್ಲಿಯೇ ರೂಪುಗೊಳ್ಳುತ್ತದೆ.ವಿದ್ಯಾ ಸಂಸ್ಸ್ಥೆಯ ಹುಟ್ಟು ಹಾಗು ಬೆಳವಣಿಗೆಗೆ ವಿದ್ಯಾರ್ಥಿಗಳು ಆದರ್ಶರಾಗಬೇಕು, ಸಾಮಾಜಿಕ ಮೌಲ್ಯಗಳ ಕಲ್ಪನೆ,ಕಾರ‍್ಯಕ್ರಮಗಳನ್ನು ಓದಿನ ಜೊತೆಗೆ ಜೋಡಿಸಿಕೊಂಡು ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು” ಎಂದು ಶುಭಹಾರೈಸಿದರು. ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದಅಸ್ಮಿತ್ ಆಚಾರ್ಯ,ಮಹೇಶ್ ಬಾಬು,ವಿಖ್ಯಾತ್
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಮಾಹಿತಿ ಕರ‍್ಯಾಗಾರ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ “ಸಂದರ್ಶನವನ್ನು ಎದುರಿಸುವ ಬಗ್ಗೆ ಮಾಹಿತಿ ಹಾಗೂ ಉದ್ಯಮಶೀಲತೆಯಲ್ಲಿ ಹಣಕಾಸಿನ ಹೊಂದಾಣಿಕೆ ಮತ್ತು ಯೋಜನೆ” ಗಳ ಬಗ್ಗೆ ಒಂದು ದಿನದ ಮಾಹಿತಿ ಕರ‍್ಯಾಗಾರವನ್ನು ನಡೆಸಲಾಯಿತು.ಈ ಕರ‍್ಯಕ್ರಮದಲ್ಲಿ ಮಂಗಳೂರಿನ “ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್”ನ ಮಾಲಕರಾದ ಶ್ರೀಶ.ಕೆ. ಇವರು ಸಂಪನ್ಮೂಲ ವ್ಯಕ್ತಿಯಾಗಿ ಬಂದು ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿಯನ್ನು ನೀಡಿದರು. ಈ ಕರ‍್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು,ಶಿಕ್ಷಕವೃಂದ ಹಾಗೂ ಅಂತಿಮವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಉದ್ಯೋಗ ಮಾಹಿತಿಕೇಂದ್ರದ ನಿಯೋಜನ ಅಧಿಕಾರಿಯಾದ ಶೀಮತಿ ಉಷಾಕಿರಣ್.ಎಸ್.ಎಂ. ಕಾರ‍್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು.
ವಿವೇಕಾನಂದ ಪಾಲಿಟೆಕ್ನಿಕ್‌ನ ವಿದ್ಯಾರ್ಥಿಗೆ ಪ್ರಥಮ ರ‍್ಯಾಂಕ್
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನೆಹರು ನಗರ ಪುತ್ತೂರು,ಇದರಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡಿದ ಅಂತಿಮ ವರ್ಷದ ಹೆಮ್ಮೆಯ ವಿದ್ಯಾರ್ಥಿ ಅಂಕಿತ್ ಶೆಟ್ಟಿ ಇವರು ಕರ್ನಾಟಕ ರಾಜ್ಯದ ತಾಂತ್ರಿಕ ವಿದ್ಯಾಲಯ ಬೆಂಗಳೂರು ನಡೆಸಿದ 2021-2022ನೇ ಸಾಲಿನ ಸೆಮಿಸ್ಟರ್ ಪರೀಕ್ಷೆಯಲಿ 94.11% ಅಂಕಗಳನ್ನು ಪಡೆದು ಪ್ರಥಮ ರ‍್ಯಾಂಕನ್ನು ಗಳಿಸಿ ವಿವೇಕಾನಂದ ಪಾಲಿಟೆಕ್ನಿಕ್‌ನ ಕೀರ್ತಿಯನ್ನು ಎತ್ತರಕ್ಕೆ ಏರಿಸಿದ್ದಾರೆ. ಇವರು ಮಾಣಿಯ ಪುರಂದರ ಶೆಟ್ಟಿ ಮತ್ತು ಶರ್ಮಿಳ ಶೆಟ್ಟಿ ಇವರ ಪುತ್ರ. ಹಾಗೆಯೇ ಇದೇ ಪಾಲಿಟೆಕ್ನಿಕ್‌ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ವಿಭಾಗದ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯುಧ ಪೂಜೆ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧಪೂಜಾ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ಸರಸ್ವತಿ ಪೂಜೆ, ಪ್ರಯೋಗಾಲಯಗಳ ಪೂಜೆ ಹಾಗೂ ವಾಹನ ಪೂಜೆ ಈ ಸಂದರ್ಭದಲಿ ನಡೆಯಿತು. ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಮಣಿಲ, ಸದಸ್ಯರಾದ ರವಿ ಮುಂಗ್ಲಿಮನೆ, ಅಚ್ಯುತ ಪ್ರಭು, ಪ್ರಾಂಶುಪಾಲರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಕರ‍್ಯಕ್ರಮದಲ್ಲಿ ಭಾಗವಹಿಸಿದರು.
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ವಿಚಾರಗೋಷ್ಠಿ
ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ ನರಸಿಂಹ ನಾಯಕ್, ಕಾರ್ಯನಿರ್ವಾಹಕ ಇಂಜಿನಿಯರ್, ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಇವರಿಂದ ಇಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ವಿಚಾರಗಳಿಗೆ ಸಂಬಂಧಿಸಿದ ವಿಷಯಗಳ ವಿಚಾರಗೋಷ್ಠಿ ನಡೆಯಿತು.
ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ದಿನಾಂಕ 11-09-2022 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್‍ಯಕ್ರಮದಲ್ಲಿ ಸುಮಾರು 200 ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದೀಪ ಬೆಳಗಿಸಿ ಕಾರ್‍ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ ಹಿರಿಯ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ, ಇದೊಂದು ಸೌಹಾರ್ದ ಬೆಸೆಯುವ ಕಾರ್‍ಯಕ್ರಮ. ನಾವೆಲ್ಲರೂ ಒಟ್ಟಾಗಿ ಈ ಸಂಸ್ಥೆಯನ್ನು ಇನ್ನೂ ಎತ್ತರಕ್ಕೆ ಬೆಳೆಸೋಣ ಎಂದು ಶುಭ ನುಡಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ದೇವಿಪ್ರಸಾದ್ ಇವರು ದೇಣಿಗೆಯಾಗಿ