News and Events
ನಿವೃತ್ತ ಉದ್ಯೋಗಿಗಳಿಗೆ ಬೀಳ್ಕೊಡುಗೆ ಸಮಾರಂಭ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 33 ವರ್ಷ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಶ್ರೀಮತಿ ಸರವಣ ಮುತ್ತು ಹಾಗೂ 28 ವರ್ಷಗಳ ಕಾಲ ಕಛೇರಿ ವ್ಯವಸ್ಥಾಪಕರಾಗಿದ್ದ ಶ್ರೀಯುತ ಬಾಲಕೃಷ್ಣ ನಾಯಕ್ ಇವರಿಗೆ ಪಾಲಿಟೆಕ್ನಿಕ್ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಅಯೋಜಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಸನ್ನ ಎನ್ ಭಟ್ ಇವರು ಇಬ್ಬರು ನಮ್ಮ ಸಂಸ್ಥೆಯ ಆಸ್ತಿಯಾಗಿದ್ದಾರೆ, ನಮ್ಮ ಪಾಲಿಟೆಕ್ನಿಕ್ ಇಂದು ರಾಜ್ಯದಲ್ಲೇ ಉತ್ತಮ
ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ
ಪುತ್ತೂರು: ದಿನಾಂಕ 22-12-20 ರಂದು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮದ ಬಗ್ಗೆ ಮಾಹಿತಿ ನೀಡುವ ಪ್ರವೇಶ ಪ್ರಕ್ರಿಯೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಚಂದ್ರಕುಮಾರ್ ಅವರು ತಾಂತ್ರಿಕ ಶಿಕ್ಷಣ ಮಂಡಳಿ ಅಳವಡಿಸಿರುವ ಹೊಸ ಶಿಕ್ಷಣ ನೀತಿಯ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಸಿವಿಲ್ ವಿಭಾಗದ ಮುಖ್ಯಸ್ಥರಾದ ರವಿರಾಮ್ ಎಸ್ ಇವರು ಕಾಲೇಜಿನಲ್ಲಿ ಲಭ್ಯವಿರುವ ಪಠ್ಯೇತರ ಚಟುವಟಿಕೆಗಳಾದ ಎನ್‌ಸಿಸಿ, ಎನ್‌ಎಸ್‌ಎಸ್, ಹಾಗೂ ಯೋಗ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡು ಇದರ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂದು ಮಾಹಿತಿ
ವೆಂಕಟರಮಣ ಹೊಳ್ಳರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ಪುತ್ತೂರು: ಪೋಳ್ಯ ಸಮೀಪ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು, ಮಂಗಳೂರು ಗ್ರಾಮ ವಿಕಾಸ ಪ್ರಮುಖರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬರಿಗಾಲಿನ ಸಂತ, ದಣಿವಿರದ ಸಂಘಟಕರಾದ ವೆಂಕಟರಮಣ ಹೊಳ್ಳ ಇವರಿಗೆ ವಿವೇಕಾನಂದ ಪಾಲಿಟೆಕ್ನಿಕ್‌ನ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇವರು ಕಳೆದ 6-7 ತಿಂಗಳುಗಳಿಂದ ವಿವೇಕಾನಂದ ಪಾಲಿಟೆಕ್ನಿಕ್ ಪ್ರವರ್ತಿತ ಉದ್ಯೋಗ ನೈಪುಣ್ಯ ಶಿಬಿರದ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿದ್ದರು. ಉತ್ತಮ ಸಂಘಟಕ ಹಾಗೂ ಸರಳ ವ್ಯಕ್ತಿತ್ವದ ಇವರು ಜನಾನುರಾಗಿಯಾಗಿದ್ದರು. ಈ ಸಂತಾಪ ಸೂಚಕ ಸಭೆಯಲ್ಲಿ ವಿವೇಕಾನಂದ
ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ
ಶಿಕ್ಷಣವೆಂದರೆ ಬರೇ ಉದ್ಯೋಗಕ್ಕಾಗಿ ಇರುವ ವ್ಯವಸ್ಥೆ ಅಲ್ಲ, ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸುವ ಕೆಲಸವನ್ನು ಶಿಕ್ಷಣ ಮಾಡಬೇಕು. – ಪ್ರಸನ್ನ ಭಟ್. ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವವು ದಿನಾಂಕ 7-12-2020 ರಂದು ಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡಿತು. ಪೂಜಾ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆಗೈದು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಸಂಚಾಲಕರಾದ ಸಿ. ಮಹಾದೇವ ಶಾಸ್ತ್ರಿ ಮಣಿಲ ಇವರು ಮಾತನಾಡುತ್ತಾ, ಶಿಸ್ತು, ಸಹನೆ ಹಾಗೂ
ಆಯುಧ ಪೂಜೆ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವರ್ಷಂಪ್ರತಿ ನಡೆಯುವಂತೆ ಆಯುಧ ಪೂಜಾ ಕಾರ್ಯಕ್ರಮವು ಪುರೋಹಿತರಾದ ವೇ.ಮೂ. ನೂಜಿಮನೆ ರಾಮಕೃಷ್ಣ ಭಟ್ ಮಿತ್ತೂರು ಇವರ ನೇತೃತ್ವದಲ್ಲಿ ನಡೆಯಿತು. ಇದರ ಅಂಗವಾಗಿ ದುರ್ಗಾ ಪೂಜೆ, ಸರಸ್ವತಿ ಪೂಜೆ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ ನಡೆಯಲ್ಪಟ್ಟಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಜಯಂತಿ ನಾಯಕ್, ಸದಸ್ಯರಾದ ಅಗರ್ತಬೈಲು ಕೃಷ್ಣ ನಾಯ್ಕ, ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರಸನ್ನ ಭಟ್, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ, ನಿಕಟಪೂರ್ವ ಅಧ್ಯಕ್ಷರಾದ ಎ.ವಿ.ನಾರಾಯಣ್, ಸದಸ್ಯರುಗಳಾದ ಮೋಹಿನಿ ದಿವಾಕರ್,
ಸ್ವಾತಂತ್ರ್ಯೋತ್ಸವದ ಆಚರಣೆ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿದ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಸನ್ನ ಎನ್ ಭಟ್ ಇವರು ಮಾತನಾಡುತ್ತಾ, “ ದೇಶದ ಗತಿಯನ್ನು ಬದಲಾಯಿಸುತ್ತಿರುವ ನಮ್ಮ ಪ್ರಧಾನಿ ಮೋದಿಯವರು ಒಬ್ಬ ಯೋಗಿ. ಸ್ವಾವಲಂಬಿ ಭಾರತ ಅವರ ಕನಸು. ವಿಶ್ವಕ್ಕೇ ಬಾಧಿಸುತ್ತಿರುವ ಈ ಕೊರೋನಾ ಸಂಕಷ್ಟ ಕಾಲದಲ್ಲಿ ಆತ್ಮನಿರ್ಭರ ಭಾರತವನ್ನು ಕಟ್ಟುವುದು ನಮ್ಮ ಪ್ರಧಾನಿಯವರ ಕನಸು. ಇದಕ್ಕೆ ಪೂರಕವಾದ ಉದ್ಯೋಗ ನೈಪುಣ್ಯ ತರಬೇತಿಯು ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ನಡೆಯುತ್ತಿದೆ. 74ನೇ
ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಸಮಾರೋಪ ಸಮಾರಂಭ
ಪರಿವರ್ತನಾ ಯುಗ ಆರಂಭವಾಗಿದೆ – ನಳೀನ್ ಕುಮಾರ್ ಕಟೀಲ್ ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನ ಆಶ್ರಯದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಇವುಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿಯವರ ಆತ್ಮನಿರ್ಭರ ಭಾರತದ ಪರಿಕಲ್ಪನೆಯಡಿ ನಡೆದ ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು. ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು, ಸುಳ್ಯದ ಎ.ಪಿ.ಎಂ.ಸಿ. ಸಭಾಭವನ, ಕಲ್ಲಡ್ಕದ
ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಉದ್ಘಾಟನೆ
ಅವಕಾಶಗಳನ್ನು ಉಪಯೋಗಿಸಿಕೊಂಡು ಜೀವನ ಬೆಳಗಿಸಿ – ಯಸ್. ಆರ್. ರಂಗಮೂರ್ತಿ ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನ ಆಶ್ರಯದಲ್ಲಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವುಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿಯವರ ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಮೂರನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮವು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು. ಹೈನುಗಾರಿಕೆ, ಫ್ಯಾಭ್ರಿಕೇಶನ್, ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ಸಿಸಿಟೀವಿ
ಎರಡನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಸಮಾರೋಪ ಸಮಾರಂಭ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನ ಆಶ್ರಯದಲ್ಲಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವುಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿಯವರ ಆತ್ಮನಿರ್ಭರ ಭಾರತದ ಪರಿಕಲ್ಪನೆಯಡಿ ನಡೆಯುವ ಎರಡನೇ ಹಂತದ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು. ಕಡಬ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಮೇಶ್ ಕಲ್ಪುರೆ ಇವರು, ಶಿಬಿರಾರ್ಥಿಗಳಲ್ಲಿ ಆತ್ಮಶ್ಥೈರ್ಯ ಎದ್ದುಕಾಣುತ್ತಿದೆ. ಪಡೆದ ತರಬೇತಿಯಲ್ಲಿ ಪರಿಪೂರ್ಣತೆಯನ್ನು
ಅಯೋಧ್ಯೆಯಲ್ಲಿ ನಡೆದ ಭೂಮಿ ಪೂಜೆ ಕಾರ್ಯಕ್ರಮದ ನೇರಪ್ರಸಾರ
ಪುತ್ತೂರು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ಇಂದು ನಡೆಯುವ ಭೂಮಿ ಪೂಜಾನಾ ಕಾರ್ಯಕ್ರಮದ ನೇರ ಪ್ರಸಾರವನ್ನು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿತ್ತು. 1992 ರ ಅಯೋಧ್ಯ ಕರಸೇವೆಯಲ್ಲಿ ಭಾಗೀದಾರರಾದ ಕೃಷ್ಣಭಟ್ ಕೋಡಪದವು ಅವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ತಮ್ಮ ಅಂದಿನ ಅನುಭವವನ್ನು ಸ್ವವಿವರವಾಗಿ ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಸಂಚಾಲಕರಾದ ಮಣಿಲ ಮಹಾದೇವ ಶಾಸ್ತ್ರಿ, ಪ್ರಾಚಾರ್ಯರಾದ ಗೋಪಿನಾಥ ಶೆಟ್ಟಿ, ಹಾಗೂ ಉದ್ಯೋಗ ನೈಪುಣ್ಯ ತರಬೇತಿಯ ಸಂಪನ್ಮೂಲ ವ್ಯಕ್ತಿಗಳು, ಶಿಬಿರಾರ್ಥಿಗಳು ಹಾಗೂ ಕಾಲೇಜಿನ