News and Events
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ: ಸಂಭ್ರಮಾಚರಣೆ
ಪುತ್ತೂರು: ಭಾರತ ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿ ಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದರ ಸಲುವಾಗಿ ಸಂಸ್ಥೆಯಲ್ಲಿ ಸಂಭ್ರಮಾಚರಣೆಯನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಹಾಗೂ ಆಡಳಿತ ಮಂಡಳಿಯ ಅದ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರದ ಮಹಾದೇವ ಶಾಸ್ತ್ರಿ ಮಣಿಲ ಉಪಸ್ಥಿತರಿದ್ದರು. ಸದಸ್ಯರಾದ ರವಿಮುಂಗ್ಲಿಮನೆ ಇವರು
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಆಚರಣೆ
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ದಿನಾಂಕ 15/08/2023 ರಂದು 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿಯವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ. ಚಂದ್ರಕುಮಾರ್ ಉಪಸ್ಥಿತಿಯಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
Entrepreneurship Awareness Development Programme
A one week workshop – “Entrepreneurship Awareness Development Programme” was organized for second year Electronics and Communication students of Vivekananda Polytechnic, Puttur. Ms. Sheetal of Seventh Sense People Development Solutions conducted the workshop in association with United Nations Development Program and SAP Labs.
First Year Students Induction Program
Various sessions by experts in relevant fields were organized for first year students of Vivekananda Polytechnic, Puttur. Topics included Legal Awareness, Stress Management, Road Safety and Culture. The sessions were conducted as part of the induction process of first year students.
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ
“ಸಾಮಾನ್ಯ ಸ್ಥಿತಿಯಿಂದ ಅಸಾಮಾನ್ಯರಾಗುವ ಆಲೋಚನೆಯನ್ನು ಇಟ್ಟುಕೊಳ್ಳಿ” – ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಪುತ್ತೂರು:37 ವರ್ಷಗಳ ಇತಿಹಾಸ ಹೊಂದಿದ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ ದಿನಾಂಕ 21-07-2023 ರಂದು ಗಣಪತಿಹೋಮ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಗೊಂಡಿತು. ಪೂಜಾ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆಗೈದು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ರವರು ಮಾತನಾಡುತ್ತಾ “ಪಾಲಿಟೆಕ್ನಿಕ್ ನ ಎಲ್ಲಾ
ಪಡ್ಡಾಯೂರು ಗ್ರಾಮದಲ್ಲೊಂದು ಔಷಧೀಯ ವನ ನಿರ್ಮಾಣಕ್ಕೆ ಚಾಲನೆ
ಪುತ್ತೂರು:ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಂತೆ ವಿವೇಕಾನಂದ ಪಾಲಿಟೆಕ್ನಿಕ್‌ನ ವತಿಯಿಂದ ಪಡ್ಡಾಯೂರು ಗ್ರಾಮದೊಲ್ಲೊಂದು ಔಷಧೀಯ ವನ ನಿರ್ಮಾಣಕ್ಕೆ ದಿನಾಂಕ 13-07-2023 ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಉದ್ದೇಶವನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡುತ್ತಾ “ಇಲ್ಲಿ ನೆಡುವ ಹಣ್ಣು, ಔಷಧೀಯ ಗಿಡಮರಗಳಿಂದ ಗ್ರಾಮಸ್ಥರು, ಮುಂದಿನ ಪೀಳಿಗೆಯವರು ಹಾಗೂ ಪ್ರಾಣಿ ಪಕ್ಷಿಗಳು ಪ್ರಯೋಜನ ಪಡೆಯುವಂತಾಗಲಿ” ಎಂದು ಹಾರೈಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿಮನೆ ಮಾತನಾಡುತ್ತಾ “ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಔಷಧೀಯ ವನದಲ್ಲಿ
ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ‘ವಿವೇಕ ಸಂಜೀವಿನಿ’ ಕಾರ್ಯಕ್ರಮ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ‘ವಿವೇಕ ಸಂಜೀವಿನಿ’ ಕಾರ್ಯಕ್ರಮದ ಪರಿಕಲ್ಪನೆಯಂತೆ ಕಾಲೇಜು ಆವರಣದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆಗಾಗಿ ಗಿಡಗಳನ್ನು ನೆಟ್ಟು ಬೆಳೆಸುವ ತಯಾರಿ ಕಾರ್ಯಕ್ರಮವು ದಿನಾಂಕ 30-06-2023 ರಂದು ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರತಿಯೊಂದು ಮನೆ ಹಾಗೂ ಗ್ರಾಮಗಳಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸುವ, ಸಂರಕ್ಷಿಸುವ ಆಶಯ ಉದ್ದೇಶಗಳನ್ನು ಮನವಿ ಮಾಡಿ ಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್, ಅಧ್ಯಾಪಕ ಹಾಗೂ ಅಧ್ಯಾಪಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ
ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್‌ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ ದಿನಾಂಕ 17-06-2023 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಮಾತನಾಡುತ್ತಾ “ಈಗ ಸಮಾಜವು ನಿಮ್ಮ ತಪ್ಪು ಒಪ್ಪುಗಳನ್ನು ಸ್ವೀಕರಿಸುವ ಸಮಯ. ಇದನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯುತ ನಾಗರಿಕರಂತೆ ನಡೆದುಕೊಳ್ಳಿ, ನಿಮ್ಮ ಕೌಶಲ್ಯದಿಂದ ನೀವು ಗುರುತಿಸಿಕೊಳ್ಳುವವರಾಗಿ” ಎಂದು ಹಿತವಚನ ನುಡಿದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಜಯಂತಿ ನಾಯಕ್ ಮಾತನಾಡುತ್ತಾ “ಆವಿಷ್ಕಾರಗಳನ್ನು ತಿಳಿದುಕೊಳ್ಳುವ ಸಂಸ್ಕಾರವನ್ನು ಬೆಳೆಸಿಕೊಂಡು, ಕೆಟ್ಟ ಚಟಗಳಿಗೆ ಬಲಿಯಾಗದೆ ಶ್ರದ್ಧೆ, ಪ್ರಾಮಾಣಿಕತೆಯಿಂದ ಬಾಳಿ”
ವಿವೇಕಾನಂದ ಪಾಲಿಟೆಕ್ನಿಕ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಮತ್ತು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯ ಬ್ಲಡ್ ಸೆಂಟರ್ ಮಂಗಳೂರು ಇವುಗಳ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17-05-2023 ರಂದು ನಡೆಯಿತು. ಈ ಶಿಬಿರದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರುಗಳು, ಶಿಕ್ಷಕ ವೃಂದ, ಸಾರ್ವಜನಿಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸ್ವಯಂಪ್ರೇರಿತ ರಕ್ತದಾನದಲ್ಲಿ ಭಾಗಿಯಾದರು ಹಾಗೂ ಸುಮಾರು 80 ಯುನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.