Notice board
ನೂತನ ಕಾರ್ಯನಿರ್ವಹಣಾಧಿಕಾರಿ ಹಾಗು ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಿಯುಕ್ತಿ
ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ). ಇಲ್ಲಿಯ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀ. ಲಕ್ಷ್ಮಿಪ್ರಸಾದ್ ಬೊಟ್ಯಾಡಿ ಹಾಗು ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀ. ಮಂಕುಡೆ ವೆಂಕಟ್ರಮಣ ರಾವ್ ಇವರು 21-10-2024ರಿಂದ ನಿಯುಕ್ತಿ ಹೊಂದಿರುತ್ತಾರೆ.
ಶ್ರದ್ಧಾಂಜಲಿ.
ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ನಮ್ಮೆಲ್ಲರ ನೆಚ್ಚಿನ ಭಾಸ್ಕರ್ ಇವರು ಈ ದಿನ (18-10-2024) ಬೆಳಿಗ್ಗೆ ದೈವಾಧೀನರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿ ದೇವರು ಕರುಣಿಸಲಿ. ಓಂ ಶಾಂತಿಃ
ರೀಲ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಗೆ ತೃತೀಯ ಬಹುಮಾನ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಮಂಗಳೂರು ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಿದ ತಾಲೂಕು ಮಟ್ಟದ “ವಿಶ್ವ ಜನಸಂಖ್ಯಾ ದಿನಾಚರಣೆ” 2024-2025 ಕಾರ್ಯಕ್ರಮಕ್ಕೆ ಸಂಬಧಿಸಿದಂತೆ ನಡೆಸಿದ ರೀಲ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪ್ರತೀಶ್ ಮತ್ತು ಸೃಜನ್ ತೃತೀಯ ಬಹುಮಾನ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.